ಬೆಂಗಳೂರು, ಜೂ. 04 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ದುರಂತದ ಕುರಿತು ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತಾಡಿ, ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು .ಸರ್ಕಾರ ಇದಕ್ಕೆ ಬಹಳ ದುಃಖ ವ್ಯಕ್ತಪಡಿಸುತ್ತದೆ ಎಂದು ಹೇಳಿದರು.

Share.
Leave A Reply

Exit mobile version