ಮನಿಲಾ, ಅ.02 : ಮಧ್ಯ ಫಿಲಿಪಿನ್ಸ್ ಪ್ರಾಂತ್ಯದಲ್ಲಿ ಮಂಗಳವಾರ ತಡರಾತ್ರಿ 6.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ ಕನಿಷ್ಠ 31 ಜನರು ಮೃತಪಟ್ಟಿದ್ದಾರೆ. ಹಲವಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

ಐದು ಕಿಲೋಮೀಟರ್ ಆಳದಲ್ಲಿ ಭೂಕಂಪವಾಗಿದೆ.ತೀವ್ರ ಕಂಪನದಿಂದಾಗಿ ವಿದ್ಯುತ್ ಕಡಿತಗೊಂಡು, ನಿವಾಸಿಗಳು ಕತ್ತಲೆಯಲ್ಲೇ ಕಾಲ ಕಳೆಯುವಂತಾಗಿದೆ. ಸೆಬು ಪ್ರಾಂತ್ಯದಲ್ಲಿ ಸುಮಾರು 90,000 ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ನಗರವಾದ ಬೊಗೊದಿಂದ ಸುಮಾರು 19 ಕಿಲೋಮೀಟರ್ ಈಶಾನ್ಯಕ್ಕೆ ಇದರ ಪರಿಣಾಮ ತಟ್ಟಿದೆ.

Share.
Leave A Reply

Exit mobile version